ಪ್ಯಾರಿಸ್ ನಲ್ಲಿ ನಡೆದಿದ್ದ ಒಲಿಂಪಿಕ್ಸ್ ಕ್ರೀಡಾಕೂಟದ ಹಾಕಿಯಲ್ಲಿ ಐತಿಹಾಸಿಕ ಕಂಚು ಗೆದ್ದಿದ್ದ ಭಾರತ ತಂಡವು ಈಗ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೀನಾ ಬಗ್ಗು ಬಡೆದು ಶುಭಾರಂಭ ಮಾಡಿದೆ.
ಪ್ಯಾರಿಸ್ ಒಲಿಂಪಿಕ್ಸ್ ಮುಗಿದ ನಂತರ ಇದೇ ಮೊದಲ ಬಾರಿಗೆ ಭಾರತ ಹಾಕಿ ತಂಡ ಕಣಕ್ಕೆ ಇಳಿದಿದೆ. ಒಲಿಂಪಿಕ್ಸ್ ನಲ್ಲಿ ಕಂಚು ಗೆದ್ದಿದ್ದ ಭಾರತ ತಂಡ, ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಸೆಮಿಫೈನಲ್ ನಲ್ಲಿ ಸೋಲು ಕಂಡು, ಕಂಚಿನ ಪದಕಕ್ಕಾಗಿ ನಡೆದ ಪೈಪೋಟಿಯಲ್ಲಿ ಸ್ಪೇನ್ ವಿರುದ್ಧ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿತ್ತು.
ಹರ್ಮನ್ ಪ್ರೀತ್ ಸಿಂಗ್ ನಾಯಕತ್ವದ ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಆತಿಥೇಯ ಚೀನಾವನ್ನು 3-0 ಗೋಲುಗಳಿಂದ ಸೋಲಿಸಿದ ಭಾರತ ತಂಡ ಶುಭಾರಂಭ ಮಾಡಿದೆ. ಐದನೇ ಬಾರಿಗೆ ಭಾರತ ತಂಡ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.