ಬೆಂಗಳೂರು: ಭಾರತದ ಪ್ರಮುಖ ಅರೆಸೇನಾ ಪಡೆಗಳಲ್ಲಿ ಒಂದಾಗಿರುವ, ಸುಮಾರು 191 ವರ್ಷಗಳ ಇತಿಹಾಸವಿರುವ ಅಸ್ಸಾಂ ರೈಫಲ್ಸ್ ಪಡೆಯಲ್ಲಿ ಖಾಲಿ ಇರುವ 12 ಹುದ್ದೆಗಳ ನೇಮಕಾತಿಗಾಗಿ (Assam Rifles Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 12 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಅಸ್ಸಾಂ ರೈಫಲ್ಸ್
ಒಟ್ಟು ಹುದ್ದೆಗಳು: 12
ಹುದ್ದೆಗಳ ಹೆಸರು: ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಶಿಲ್ಲಾಂಗ್, ಮೇಘಾಲಯ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 75 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲಿಗೆ assamrifles.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
• ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
• ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
• ಭರ್ತಿ ಮಾಡಿದ ಅರ್ಜಿಯನ್ನು med-dgar@assamrifles.gov.in ಗೆ ಮೇಲ್ ಮಾಡಬೇಕು
ಸಂದರ್ಶನ ನಡೆಯುವ ಸ್ಥಳ
Assam Rifles HQ DGAR, Laltkor Shillong
ಸಂದರ್ಶನದ ದಿನಾಂಕ: ಮೇ 4ರಿಂದ ಮೇ 6
ಇದನ್ನೂ ಓದಿ: ಆಯುಷ್ ಇಲಾಖೆಯ ಅವ್ಯವಸ್ಥೆ, ಭ್ರಷ್ಟಾಚಾರದ ವಿರುದ್ಧ ಮಾನವ ಹಕ್ಕು-ಭ್ರಷ್ಟಾಚಾರ ವಿರೋಧಿ ಸಂಘ ಗಂಭೀರ ಆರೋಪ



















