ಬೆಂಗಳೂರು : ಭಾರತೀಯ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶಕ್ಕೆ ಸೇವೆ ಸಲ್ಲಿಸಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಭಾರತೀಯ ಸೇನೆಯ ಅತ್ಯಂತ ಹಳೆಯ ಅರೆಸೇನಾ ಪಡೆಯಾಗಿರುವ ಅಸ್ಸಾಂ ರೈಫಲ್ಸ್ ನಲ್ಲಿ ಖಾಲಿ ಇರುವ 113 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Assam Rifles Recruitment 2026) ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಅಸ್ಸಾಂ ರೈಫಲ್ಸ್
ಹುದ್ದೆಗಳ ಹೆಸರು: ರೈಫಲ್ ಮನ್, ರೈಫಲ್ ವುಮನ್ ಇತ್ಯಾದಿ
ಒಟ್ಟು ಹುದ್ದೆಗಳು: 113
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 11
95 ರೈಫಲ್ ಮನ್, ರೈಫಲ್ ವುಮನ್, 6 ವಾರಂಟ್ ಆಫೀಸರ್, 3 ಹವಿಲ್ದಾರ್ ಕ್ಲರ್ಕ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ assamrifles.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಗಮನವಿಟ್ಟು ಓದಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Directorate General Assam Rifles (Recruitment Branch), Laitkor, Shillong Meghalaya – 793010
ಅಸ್ಸಾಂ ರೈಫಲ್ಸ್ ಜವಾಬ್ದಾರಿಗಳು
• ಭಾರತ ಮತ್ತು ಮ್ಯಾನ್ಮಾರ್ ಗಡಿಯ ರಕ್ಷಣೆ ಮಾಡುವುದು.
• ಈಶಾನ್ಯ ಭಾರತದ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಉಗ್ರಗಾಮಿ ಚಟುವಟಿಕೆಗಳನ್ನು ಹತ್ತಿಕ್ಕುವುದು.
• ನೈಸರ್ಗಿಕ ವಿಕೋಪಗಳ ಸಮಯದಲ್ಲಿ ಮಾನವೀಯ ಸಹಾಯ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವುದು.
ಇದನ್ನೂ ಓದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!



















