ಬೆಂಗಳೂರು: ಭಾರತೀಯ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶಕ್ಕೆ ಸೇವೆ ಸಲ್ಲಿಸಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಭಾರತೀಯ ಸೇನೆಯ ಅಸ್ಸಾಂ ರೈಫಲ್ಸ್ ನಲ್ಲಿ ಖಾಲಿ ಇರುವ 95 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Assam Rifles Recruitment 2026) ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಅಸ್ಸಾಂ ರೈಫಲ್ಸ್
ಹುದ್ದೆಗಳ ಹೆಸರು: ರೈಫಲ್ ಮನ್, ರೈಫಲ್ ವುಮನ್
ಒಟ್ಟು ಹುದ್ದೆಗಳು: 95
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 9
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿ ಇದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದವರಿಗೆ 100 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.
ಅಭ್ಯರ್ಥಿಯ ಪರಿಶೀಲನೆ, ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ, ಫೀಲ್ಡ್ ಟ್ರಯಲ್, ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ assamrifles.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : ಬೆಳ್ಳಿ ಡೌನ್.. ಚಿನ್ನ ಅಪ್ | ಇಂದಿನ ಬೆಲೆ ಚೆಕ್ ಮಾಡಿ!



















