ಪಾಟ್ನಾ: ಬಿಹಾರದಲ್ಲಿ (Bihar) ಮತ್ತೋರ್ವ ಬಿಜೆಪಿ ಮುಖಂಡನ ಹತ್ಯೆ ನಡೆದಿದೆ.
ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ದುಷ್ಕರ್ಮಿಗಳು ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸುರೇಂದ್ರ ಕೆವತ್ (52) ಹತ್ಯೆಯಾಗಿರುವ ಬಿಜೆಪಿ ನಾಯಕ. ಸುರೇಂದ್ರ, ಶೇಕ್ ಪುರದಲ್ಲಿರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ಸುರೇಂದ್ರ ಅವರಿಗೆ 4 ಗುಂಡುಗಳು ತಗುಲಿದ್ದು, ತಕ್ಷಣ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬಿಹಾರದಲ್ಲಿ 2 ವಾರದ ಅಂತರದಲ್ಲಿ ಇಬ್ಬರು ಬಿಜೆಪಿ ನಾಯಕರ ಹತ್ಯೆ ಮಾಡಲಾಗಿದ್ದು, ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ (Gopal Khemka) ಅವರನ್ನು ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.



















