ಚಿಕ್ಕಬಳ್ಳಾಪುರ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಮತ್ತು ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಸಾವಿನ ವರದಿಗಳ ಬೆನ್ನಲ್ಲೇ, ರಾಜ್ಯದ ಕೆಲವೆಡೆ ಪ್ರತಿಭಟನೆ, ಆಕ್ರೋಶ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಅಲಿಪುರದಲ್ಲಿ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದು, ಮೂರು ದಿನಗಳವರೆಗೆ ಶೋಕಾಚರಣೆ ಘೋಷಿಸಿ, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.
ಖಮೇನಿ ಹತ್ಯೆ ವರದಿಗಳ ಹಿನ್ನೆಲೆಯಲ್ಲಿ, ಅಲಿಪುರ ಪಟ್ಟಣದ ಜನರು ಸಾಮೂಹಿಕ ಶೋಕಾಚರಣೆ ಮಾಡಿದರು. ದುಃಖದ ಸಂಕೇತವಾಗಿ ಕಪ್ಪು ಬಟ್ಟೆ ಧರಿಸಿ, ಬಾವುಟಗಳನ್ನು ಹಿಡಿದು ಅಲ್ಲಿನ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಲ್ಲದೆ, ಬೆಂಗಳೂರಿನಲ್ಲಿಯೂ ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಸದಸ್ಯರು ಹತ್ಯೆಯನ್ನು ಖಂಡಿಸಿದ್ದಾರೆ.
ಇದನ್ನೂ ಓದಿ : ಇರಾನ್-ಇಸ್ರೇಲ್ ಸಂಘರ್ಷ | ದುಬೈನಲ್ಲಿ ಬಳ್ಳಾರಿ ಮೂಲದ 35 ಜನ ಲಾಕ್



















