ಬೆಂಗಳೂರು: ಸಬ್ ಇನ್ಸ್ ಪೆಕ್ಟರ್ ವಿರುದ್ಧ ತಾಯಿ ಮೇಲೆಯೇ ಹಲ್ಲೆ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ರಾಮಮೂರ್ತಿ ನಗರ (Ramamurthy Nagar) ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (Sub Inspector) ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಮಂಜುನಾಥ್ ಹಲ್ಲೆ ಮಾಡಿದ ಸಬ್ ಇನ್ಸ್‌ಪೆಕ್ಟರ್ ಎನ್ನಲಾಗಿದೆ. ಈ ಕುರಿತು ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ತಾಯಿ ಮಂಗಳಮ್ಮ ದೂರು ದಾಖಲಿಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ಮಂಜುನಾಥ್‌ಗೆ ಮದುವೆಯಾಗಿದ್ದು, ಕೆಆರ್ ಪುರದ (KR Puram) ಅಯ್ಯಪ್ಪ ನಗರದಲ್ಲಿ ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತು ಮಾಹಿತಿ ಪಡೆದ ತಾಯಿ ಮಂಗಳಮ್ಮ ಮತ್ತು ಮಂಜುನಾಥನ ಇಬ್ಬರು ಸಹೋದರಿಯರು ಆ ಮಹಿಳೆಯ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಈ ವಿಚಾರ ತಿಳಿದ ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಸ್ಥಳಕ್ಕೆ ಹೋಗಿ ತಾಯಿ ಮಂಗಳಮ್ಮ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಮಗ ಮಂಜುನಾಥ್, ಮಹಿಳೆ ಮತ್ತು ಮತ್ತೊಬ್ಬ ವ್ಯಕ್ತಿಯ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.