ಬೆಂಗಳೂರು : ನಗರದ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಬಳಿಕ ಆತ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೊಹಮ್ಮದ್ ತಾಸಿಫ್ (27) ಮೃತ ವ್ಯಕ್ತಿಯಾಗಿದ್ದು, ಪತ್ನಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂಬ ಶಂಕೆ ಮೇಲೆ ಪತಿ ಅಕ್ಬರ್ ಸೇರಿ ಆತನ ಸಹಚರರು ಮೊಹಮ್ಮದ್ ತಾಸಿಫ್ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.
ಅಕ್ಬರ್ ಹಾಗೂ ಆತನ ಸಹಚರರು ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಮೊಹಮ್ಮದ್ ತಾಸಿಫ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಲಾಟೆಯ ಬಳಿಕ ತಾಸಿಫ್ ಅಲ್ಲಿಂದ ರಾಮನಗರಕ್ಕೆ ತೆರಳಿದ್ದರು.
ರಾಮನಗರದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೊಹಮ್ಮದ್ ತಾಸಿಫ್ ಸಾವನ್ನಪ್ಪಿದ್ದಾರೆ.
ಈ ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!


















