ಕೊಪ್ಪಳ: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್ ಟೇಬಲ್ ಮೇಲೆ ಪುಂಡರ ಗುಂಪು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸದ್ಯ ಪೊಲೀಸರು ಸ್ಥಳೀಯರ ಸಹಕಾರದಿಂದ ರೌಡಿಶೀಟರ್ ಅರ್ಬಾಜ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಗಂಗಾವತಿ ಹೊರವಲಯದಲ್ಲಿ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಈ ಸುದ್ದಿ ಕೇಳಿ ಬರುತ್ತಿದ್ದಂತೆ ಗಂಗಾವತಿ ಗ್ರಾಮಾಂತರ ಠಾಣೆ ಕಾನ್ಸ್ಟೇಬಲ್ ಬಸವರಾಜುಗೆ ಥಳಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಮತ್ತೊಬ್ಬ ಕಾನ್ಸ್ಟೇಬಲ್ ಮೇಲೂ ಹಲ್ಲೆಗೆ ಪ್ರಯತ್ನ ಮಾಡಿದ್ದಾರೆ. ಪೊಲೀಸ್ ಪೇದೆ ಬಸವರಾಜು ಅವರನ್ನು ಈಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೌಡಿಶೀಟರ್ ಅರ್ಬಾಜ್ ಈ ಹಿಂದೆ ಕೂಡ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.