ಪುತ್ತೂರು: ವೈದ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿರುವ ಘಟನೆ ಪಟ್ಟಣದಲ್ಲಿ ನಡೆದಿದ್ದು, ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಮತ್ತು ವೈದ್ಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳಾದ ಸಮಾದ್ ಮತ್ತು ಜೊಹರಾ ಎಂಬುವವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ನಿನ್ನೆ ರಾತ್ರಿ ಸರಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಘಟನೆ ನಡೆಯುತ್ತಿದ್ದಂತೆ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಳಿ ಕಳುಹಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ವೈದ್ಯರು ಹಾಗೂ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರ ಕ್ರಮ ಖಂಡಿಸಿದ್ದಾರೆ. ಹಿರಿಯ ಅಧಿಕಾರಿಗಳು ಠಾಣೆಗೆ ಬಾರದಿದ್ದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.