ಬೆಂಗಳೂರು: ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ಸಿಎಂಗೆ ಆತಂಕ ಶುರುವಾಗಿದೆ.
ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಮನೆ ಮೇಲೆ ದಾಳಿ ಮಾಡಿದೆ. ಈ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದೆ.
ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದೆ. ಹೀಗಾಗಿ ಪ್ರಕರಣದ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯಗೂ ಸಹ ದಾಳಿಯ ಆತಂಕ ಮನೆ ಮಾಡಿದೆ. ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಮನೆ ಮೇಲೆ ಇಡಿ ದಾಳಿ ಮಾಡಿದೆ. ಈಗ ಬೆಂಗಳೂರಿನ ಮಲ್ಲೇಶ್ವರಂನ 10ನೇ ಕ್ರಾಸ್ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ನಿವಾಸದ ಮೇಲೂ ಸಹ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಟೇಶ್ ಮನೆಯಲ್ಲೇ ಇದ್ದ ಸಂದರ್ಭದಲ್ಲಿ ಐವರು ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮುಡಾ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದೂರುದಾರರಿಗೆ ನೋಟಿಸ್ ನೀಡಿ ಮಾಹಿತಿ ಕಲೆಹಾಕುವುದರೊಂದಿಗೆ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.