ಬೆಂಗಳೂರು : ಧರ್ಮಸ್ಥಳ ಘಟನೆ ವಿಚಾರದಲ್ಲಿ ಪಾರದರ್ಶಕ ತನಿಖೆ ಆಗಬೇಕು ಎಂದಿದ್ದೆವು. ಪತ್ರಕರ್ತರ ಮೇಲೆ ದಾಳಿ ಅಕ್ಷಮ್ಯ ಅಪರಾಧ. ಇದರ ಬಗ್ಗೆ ಗೃಹ ಸಚಿವರು ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ದಕ್ಷಿಣ ಕನ್ನಡದಲ್ಲಿ ಹಿಂದೆ ಕುಕ್ಕರ್ ಬ್ಲಾಸ್ಟ್ ಆದಾಗ ಸಣ್ಣ ಘಟನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಪದೆ ಪದೆ ಆದರೂ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಈಗಲಾದರೂ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ವಿಜಯೇಂದ್ರ ಒತ್ತಾಯಿಸಿದರು.



















