ಮಂಗಳೂರು: ಮಸಾಜ್ ಪಾರ್ಲರ್ (Massage Parlor) ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆ ಸಂಸ್ಥಾಪಕ ಹಾಗೂ ಕಾರ್ಯಕರ್ತರನ್ನು ಪೊಲೀಸರು (police)ವಶಕ್ಕೆ ಪಡೆದಿದ್ದಾರೆ.
ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಸುಮಾರು 10 ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‌ಟಿಸಿ (ksrtc)ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದರು. ಸೆಲೂನ್‍ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿ, ಪೀಠೋಪಕರಣ ಧ್ವಂಸ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ(police station) ಪ್ರಕರಣ ದಾಖಲಾಗಿದೆ. ಹರ್ಷ ರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇಶ, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್ ವಿಘ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ, ಪ್ರಸಾದ್ ಅತ್ತಾವರ ಬಂಧಿತರು ಎನ್ನಲಾಗಿದೆ.
ಮಂಗಳೂರು ಹೊರವಲಯದ ಕುಡುಪು ಮನೆಯಲ್ಲಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ಸಂದರ್ಭದಲ್ಲಿ ವ್ಯಕ್ತಿಯ ಮೇಲೆ ಕೂಡ ಕಾರ್ಯಕರ್ತರು ಹಲ್ಲೆ ನಡೆಸಿದ್ದರು.