ಶಿವಮೊಗ್ಗ : ಬೆಕ್ಕಿನ ವಿಷಯಕ್ಕೆ ಮನೆಗೆ ನುಗ್ಗಿ ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದೆ.
ಜಿಲ್ಲೆಯ ಸಾಗರದ ಜೆಸಿ ನಗರದಲ್ಲಿ ಈ ಘಟನೆ ನಡೆದಿದೆ. ಆನಂದ್ ಎಂಬುವವರ ಮನೆಗೆ ನುಗ್ಗಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಸದ್ಯ ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು, ಪ್ರತಿ ದೂರು ದಾಖಲಾಗಿದೆ.
ಅರ್ಮಾನ್ ಎಂಬುವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೆಕ್ಕೊಂದು ಅಡ್ಡ ಬಂದಿದೆ. ಆಗ ಬೆಕ್ಕಿನ ಮೇಲೆ ಕಾರು ಹತ್ತಿದೆ. ಕಾರಿನ ಹಿಂದೆ ಬೈಕ್ ನಲ್ಲಿ ಬರುತ್ತಿದ್ದ ಆನಂದ್ ಇದನ್ನು ಗಮನಿಸಿ ಕಾರನ್ನ ನಿಲ್ಲಿಸಿದ್ದಾರೆ. ಆಗ ಇಬ್ಬರ ಮಧ್ಯೆ ಸಣ್ಣ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಅರ್ಮಾನ್ ಮತ್ತು ಹಲವರು, ಆನಂದ್ ಮನೆಗೆ ಬಂದು ಗಲಾಟೆ ಮಾಡಿದ್ದಾರೆ.
ಅರ್ಮನ್ ಮತ್ತು ಆನಂದ ದೂರು ಪ್ರತಿ ದೂರು ದಾಖಲಿಸಿದ್ದಾರೆ. ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.