ಧಾರವಾಡ : ನಾಲ್ವರು ಮುಸ್ಲಿಂ ಯುವಕರು ಹಿಂದೂ ಯುವಕನ ಮನೆಯ ಮುಂದೆ ಹಲ್ಲೆ ನಡೆಸಿದ ಪರಿಣಾಮ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಸಿಗರೇಟು ಸೇದಬೇಡಿ ಎಂದು ಬುದ್ದಿ ಹೇಳಿದಕ್ಕೆ ಮುಸ್ಲಿಂ ಯುವಕರು ಪುಂಡಾಟ ಮೆರೆದಿದ್ದಾರೆ. ನಗರದ ಗಾಂಧಿ ಚೌಕ್ ಬಳಿ ಈ ಘಟನೆ ನಡೆದಿದೆ. ಶಿರಿಶ್ ಬಳ್ಳಾರಿ ಹಾಗೂ ಆತನ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಶಿರಿಶ್ ಆರೆಸ್ಸೆಸ್ ಮುಖಂಡ ಎನ್ನಲಾಗಿದೆ.
ಮನೆಯೊಳಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ನಾಲ್ವರು ನಾಪತ್ತೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಶಹ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.