ಹುಬ್ಬಳ್ಳಿ: ಬೀದರ್ ನಲ್ಲಿ ಎಟಿಎಂಗೆ ಹಣ ತುಂಬುವ ಸಿಬ್ಬಂದಿ ಮೇಲೆ ಫೈರಿಂಗ್ ನಡೆಸಿ ಹಣ ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾಗೂ ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ (Mangaluru Bank Robbery) ಮಾಡಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿರುವ ಘಟನೆ ಮಾಸುವ ಮುನ್ನವೇ ಈಗ ಛೋಟಾ ಬಾಂಬೆಯಲ್ಲೂ ಇಂತಹ ಘಟನೆ ಬೆಳಕಿಗೆ ಬಂದಿದೆ.
ನಗರದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ದರೋಡೆಗೆ ವಿಫಲ ಯತ್ನ ನಡೆದಿದೆ. ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆದಿದೆ. ಬ್ಯಾಂಕಿನ ಮುಖ್ಯದ್ವಾರದ ಬಾಗಿಲು ಮುರಿದು, ಬೀಗ ಕಟ್ ಮಾಡಿರುವ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ.
ಆದರೆ, ಬ್ಯಾಂಕ್ ದರೋಡೆಗೆ ಖದೀಮರು, ವಿಫಲ ಯತ್ನ ನಡೆಸಿದರೂ ಸಿಬ್ಬಂದಿ ಮಾತ್ರ ದೂರು ನೀಡಿಲ್ಲ.