ಕಾರವಾರ: ವಾಹನದ ನಂಬರ್ ಪ್ಲೇಟ್ ಬದಲಾಯಿಸಿ ಗೋ ಕಳ್ಳತನಕ್ಕೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ತಲಗೇರಿ ಪ್ರದೇಶದಲ್ಲಿ ನಡೆದಿದೆ.
ಮಧ್ಯರಾತ್ರಿ ವೈಟ್ ಕಲರ್ ಕಾರಿನಲ್ಲಿ ಆಗಮಿಸಿದ್ದ ಆರೋಪಿಗಳು ಗೋ ಕಳ್ಳತನಕ್ಕೆ ಯತ್ನಿಸುತ್ತಿದ್ದರೆಂದು ಶಂಕಿಸಿದ ಸ್ಥಳೀಯರು ಅವರನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ತಬ್ಬಿಬ್ಬಾಗಿ ಯಾವುದೇ ಸಮರ್ಪಕ ಉತ್ತರ ನೀಡಲು ವಿಫಲರಾಗಿದ್ದಾರೆ.
ಸ್ಥಳೀಯರು ಸುತ್ತುವರಿದುದನ್ನು ಗಮನಿಸಿದ ಕಳ್ಳರು ತಮ್ಮ ಕಾರನ್ನೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನ ಮೇಲೆ ಹಲ್ಲೆ!



















