ರಾಯಚೂರು: ವಿಪ ಸದಸ್ಯ ಶರಣಗೌಡ ಬಯ್ಯಾಪುರ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಮಾಜಿ ಶಾಸಕ ಡಿ.ಎಸ್.ಹೂಲಿಗೇರಿ ಹಾಗೂ ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಬಣ ರಾಜಕೀಯದಿಂದಾಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹಲ್ಲೆಗೆ ಯತ್ನಿಸಿರುವ ಆರೋಪದ ಈ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ನಡೆದಿದೆ.
ಲಿಂಗಸುಗೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ನಾಯಕ್ ಯಾರೂ ಎಂಬುವುದೇ ಗೊತ್ತಿಲ್ಲ ಎಂದು ಎಂಎಲ್ ಸಿ ಬಯ್ಯಾಪೂರ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಮಾಜಿ ಶಾಸಕ ಡಿಎಸ್ ಹೂಲಗೇರಿ ಬೆಂಬಲಿಗರು, ಇಂದು ಗೊರೇಬಾಳ ಗ್ರಾಮದಲ್ಲಿ ಶರಣಗೌಡ ಬಯ್ಯಾಪೂರ ಕಾರು ಅಡ್ಡಗಟ್ಟಿ, ಬಯ್ಯಾಪುರ ಆಪ್ತನಿಗೆ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.



















