ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಪೊಲೀಸ್ ಮೇಲೆಯೇ ಯುವಕರು ಹಲ್ಲೆಗೆ ಯತ್ನಿಸಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಈ ಘಟನೆ ನಡೆದಿದೆ.
ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಬ್ಬರು ಯುವಕರನ್ನು ತಡೆದು ಮದ್ಯಪಾನ ಮಾಡಿರುವ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಯುವಕರು ಪೊಲೀಸ್ ಮೇಲೆಯೇ ದರ್ಪ ತೋರಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದಾಗಿ ತಿಳಿದುಬಂದಿದೆ.
ಇದಲ್ಲದೆ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಮೈಕೈ ಮುಟ್ಟಿ ಹಲ್ಲೆಗೆ ಯತ್ನಿಸಿರುವ ಆರೋಪ ಕೂಡ ಕೇಳಿಬಂದಿದೆ. ಘಟನೆ ನಡೆದ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪುಂಡ ಯುವಕರ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆಗೆ ಯತ್ನಿಸಿದವರು ಗಾಂಧೀವಾಡಾ ನಿವಾಸಿಗಳೆಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಬಾಂಗ್ಲಾದಲ್ಲಿ ಹವಾ ಸೃಷ್ಟಿಸಿದ್ದ ಡೊನಾಲ್ಡ್ ಟ್ರಂಪ್ ಹೋಲುವ ಎಮ್ಮೆ ಬಕ್ರೀದ್‌ಗೆ ಬಲಿ!



















