ಕಲಬುರಗಿ: ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ.
ದರೋಡೆಕೋರ ಅವತಾರ್ ಸಿಂಗ್ ಮೇಲೆ ಕಲಬುರಗಿ ಸಿಟಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಕಾಲಿಗೆ ಗುಂಡೇಟು ತಗುಲಿದೆ. ಆರೋಪಿ ಅವತಾರ್ ಸಿಂಗ್ ಕಲಬುರಗಿ ವಿವಿಧ ಠಾಣೆಯ ಪೊಲೀಸರಿಗೆ ಬೇಕಾಗಿದ್ದ. ಅವತಾರ ಸಿಂಗ್ ಢಾಬಾವೊಂದರ ರಾಬರಿ ಕೇಸ್ ನಲ್ಲಿ ಪೊಲೀಸರಿಗೆ ಬೇಕಾಗಿದ್ದ. ಕಳೆದ ಮೂರು ದಿನಗಳಿಂದ ಅವತಾರ ಸಿಂಗ್ ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇಲೆ ಉಪಳಾಂವ ಕ್ರಾಸ್ ಹತ್ತಿರ ಆತನನ್ನು ಹಿಡಿಯಲು ತೆರಳಿದ್ದಾಗ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸಾಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಬ್ ಅರ್ಬನ್ ಠಾಣೆ ಇನ್ಸ್‌ಪೆಕ್ಟರ್ ಸಂತೋಷ ತಟ್ಟೆಂಪಲ್ಲಿ ಗುಂಡು ಹೊಡೆದಿದ್ದರು. ಒಂದು ಸುತ್ತು ಗಾಳಿಯಲ್ಲಿ ಗುಂಡಿ ಹಾರಿಸಿ ಬಳಿಕ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಆರೋಪಿಯ ಮೇಲೆ ದರೋಡೆ, ರಾಬರಿ ಸೇರಿ 13 ಪ್ರಕರಣಗಳಿವೆ ಎನ್ನಲಾಗಿದೆ.