ಮೈಸೂರು: ಜಿಲ್ಲೆಯಲ್ಲಿ ಹಾಡಹಗಲೇ ಲಾಂಗ್ ನಿಂದ ಹತ್ಯೆಗೆ ಯತ್ನಿಸಿರುವ ಭಯಾನಕ ಘಟನೆಯೊಂದು ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತ ವಿಡಿಯೋ ವೈರಲ್ ಆಗಿದೆ. ಮೈಸೂರಿನ ಉತ್ತರಾಧಿಮಠ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಶನಿವಾರ ಈ ಘಟನೆ ನಡೆದಿದೆ. ಸೆಕ್ಯೂರಿಟಿ ಏಜೆನ್ಸಿ ಆಫೀಸರ್ ಹಾಗೂ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ನಡುವೆ ಜಗಳ ನಡೆದಿದ್ದು, ಅದು ವಿಕೋಪಕ್ಕೆ ಹೋಗಿದೆ. ಈ ವೇಳೆ ಲಾಂಗ್ ನಿಂದ ಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಸರಿಯಾಗಿ ಸಂಬಳ ನೀಡಿದ ಹಿನ್ನಲೆಯಲ್ಲಿ ಏಜೆನ್ಸಿ ನಡೆಸುತ್ತಿದ್ದವರ ಮೇಲೆ ವ್ಯಕ್ತಿಯೋರ್ವ ಹಲ್ಲೆಗೆ ಮುಂದಾಗಿದ್ದ ಎನ್ನಲಾಗಿದೆ.