ಚಿಕ್ಕೋಡಿ: 13 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಮತ್ತೊಂದು ಅಮಾನವೀಯ ಘಟನೆ ರಾಜ್ಯದಲ್ಲಿ ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ. ಕಾಮುಕ ಮಹಾಂತೇಶ್ ಹಿಪ್ಪರಗಿ ಎಂಬಾತನ ವಿರುದ್ಧ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೋಟದ ವಸತಿಯ ಮನೆಯಲ್ಲಿ ಯಾರು ಇಲ್ಲದ ವೇಳೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂಬ ಆರೋಪ ಕೇಳಿ ಬಂದಿದೆ. ಮಹಾಂತೇಶ ಅತ್ಯಾಚಾರಕ್ಕೆ ಯತ್ನಿಸದಾಗ ಬಾಲಕಿ ಜೋರಾಗಿ ಕಿರುಚಾಡಿ ಮನೆಯಿಂದ ಆಚೆ ಓಡಿ ಬಂದಿದ್ದಾಳೆ. ಆಗ ಅಕ್ಕಪಕ್ಕದ ಮನೆಯವರು ಬಾಲಕಿಯನ್ನು ರಕ್ಷಿಸಿದ್ದಾರೆ. ಸದ್ಯ ಆರೋಪಿ ಮಹಾಂತೇಶ ವಿರುದ್ಧ ಐಗಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.