ಬೆಳಗಾವಿ: ಪಂಚಮಸಾಲಿ ಸಮುದಾಯದಿಂದ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸುವ ಘಟನೆ ನಡೆದಿದೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಆದರೂ ಸಹ ಪ್ರತಿಭಟನೆಕಾರರು ಬ್ಯಾರಿಕೇಡ್ ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ.
ಘಟನೆಯಲ್ಲಿ ಪ್ರತಿಭಟನಾಕಾರರಿಗೆ ಗಾಯಗಳಾಗಿವೆ. ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ತಡೆದಿದ್ದಾರೆ. ಈ ವೇಳೆ ವಾಗ್ವಾದ ನಡೆದಿದೆ. ಹೀಗಾಗಿ ಗುಂಪು ಚದುರಿಸುವುದಕ್ಕಾಗಿ ಲಾಠಿ ಚಾರ್ಜ್ ನಡೆಸಿದ್ದಾರೆ.
ತಿಭಟನಾಕಾರರು ಬ್ಯಾರಿಕೇಡ್ ಗಳನ್ನು ಕಿತ್ತೆಸೆದು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸುತ್ತಿದ್ದಾರೆ. ಅಲ್ಲದೇ, ಈ ವೇಳೆ ಆಕ್ರೋಶಗೊಂಡು ಪೊಲೀಸರು ಹಾಗೂ ರಾಜಕಾರಣಿಗಳ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.