T20 World Cup 2024ರ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಸೂಪರ್ 8ರ ಪ್ರವೇಶಕ್ಕೆ ಆಸ್ಟ್ರೇಲಿಯಾ ಸಹಾಯ ಮಾಡಿದೆ.
ಈ ಬಾರಿಯ ವಿಶ್ವಕಪ್ ನಲ್ಲಿ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕಿಳಿದಿದ್ದ ಇಂಗ್ಲೆಂಡ್ ತಂಡದ ಮೊದಲ ಪಂದ್ಯ ಮಳೆಗೆ ಬಲಿಯಾಗಿತ್ತು. ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಸೋಲು ಕಂಡಿತ್ತು. ಮೂರನೇ ಪಂದ್ಯದಲ್ಲಿ ಒಮಾನ್ ವಿರುದ್ದ ಗೆಲ್ಲುವ ಮೂಲಕ ಗೆಲುವಿನ ಖಾತೆ ತೆರೆದಿತ್ತು. ನಮೀಬಿಯಾ ಪಂದ್ಯ ನಿರ್ಣಾಯಕವಾಗಿತ್ತು. ನಮೀಬಿಯಾ ವಿರುದ್ಧ 41 ರನ್ ಗಳ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 5 ಪಾಯಿಂಟ್ ಗಳಿಸುವುದರ ಮೂಲಕ ಎರಡನೇ ಸ್ಥಾನಕ್ಕೆ ಏರಿಕೆ ಕಂಡು 8ರ ಘಟ್ಟ ತಲುಪಿದೆ.
ಹೀಗಾಗಿ ಆಸ್ಟ್ರೇಲಿಯಾ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯವು ಇಂಗ್ಲೆಂಡ್ ಪಾಲಿಗೆ ನಿರ್ಣಾಯಕವಾಗಿತ್ತು. ಇಂಗ್ಲೆಂಡ್ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡ 20 ಓವರ್ ಗಳಲ್ಲಿ 180 ರನ್ ಗಳಿಸಿತ್ತು. ಕಠಿಣ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 19.4 ಓವರ್ಗಳಲ್ಲಿ ಗುರಿ ಮುಟ್ಟುವಲ್ಲಿ ಯಶಸ್ವಿಯಾಗಿದೆ. ಈ ಗೆಲುವಿನ ಮೂಲಕ ಇಂಗ್ಲೆಂಡ್ ತಂಡ ಸೂಪರ್-8 ಹಂತಕ್ಕೇರುವಲ್ಲಿ ಆಸ್ಟ್ರೇಲಿಯಾ ಪ್ರಮುಖ ಪಾತ್ರ ವಹಿಸುವಂತಾಯಿತು.
