ಬೆಂಗಳೂರು: ಇತ್ತೀಚೆಗಷ್ಟೇ ಸಿಲಿಕಾನ್ ಸಿಟಿಯಲ್ಲಿ ಭಾರೀ ಗಾಳಿ, ಮಳೆಗೆ ಮರ ಬಿದ್ದ ಪರಿಣಾಮ ಆಟೋ ಚಾಲಕ ಸಾವನ್ನಪ್ಪಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯು ಆಟೋ ಚಾಲಕನ ಕುಟುಂಬಕ್ಕೆ ಪರಿಹಾರ ಘೋಷಿಸಿದೆ.
ಕಳೆದ ಗುರುವಾರ ಕತ್ರಿಗುಪ್ಪೆ ಬಳಿ ಮರ ಬಿದ್ದ ಪರಿಣಾಮ ಆಟೋ ಚಾಲಕ ಸಾವನ್ನಪ್ಪಿದ್ದ. ಸಾವನ್ನಪ್ಪಿದ ಮಹೇಶ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಬಿಬಿಎಂಪಿಯಿಂದ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.