ಬೆಂಗಳೂರು: ಮೆಟ್ರೋ ವೈಡಕ್ಟ್ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲಹಂಕ ಸಂಚಾರ ಪೊಲಿಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಲಾರಿ ಚಾಲಕ, ಎನ್ ಸಿಸಿ ಕಂಪನಿ ಮ್ಯಾನೇಜರ್. ಕಂಟ್ರಾಕ್ಟರ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿದೆ.
BNS 281 ,106, ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಮಾವ ಸೈಯಾದ್ ಖಾದರ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಕುರಿತು ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಮಂಗಳವಾರ ತಡರಾತ್ರಿ ನಡೆದಿತ್ತು.