ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ.
ಮಂಜುನಾಥ್ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿ ತಮ್ಮ ಸಾವಿಗೆ ಕಾರಣವೇನು ಎಂಬುದನ್ನು ವಿವರಿಸಿದ್ದಾರೆ ಎನ್ನಲಾಗಿದೆ. ಬಳಿಕ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಜುನಾಥ್ ಅವರು ಲೋಕೇಶ್ ಮತ್ತು ಸುಷ್ಮಾ ಎಂಬುವರಿಂದ 30 ಸಾವಿರ ಸಾಲ ಪಡೆದಿದ್ದರು. ಬಳಿಕ ಸಾಲದ ವಿಚಾರವಾಗಿ ಲೋಕೇಶ್ ಅವರ ಆಟೋವನ್ನು ತೆಗೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಇದರಿಂದ ತೀವ್ರ ಮನನೊಂದಿದ್ದ ಮಂಜುನಾಥ್ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ.
ತಮ್ಮ ಸಾವಿಗೆ ಸಾಲಗಾರರ ಕಿರುಕುಳವೇ ಕಾರಣ ಎಂದು ವಿಡಿಯೋದಲ್ಲಿ ಮಂಜುನಾಥ್ ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ವಿಡಿಯೋ ಸೇರಿದಂತೆ ಇತರ ಸಾಕ್ಷ್ಯಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ : ಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿಯ ಹತ್ಯೆ.. ಇಬ್ಬರ ಬಂಧನ!



















