ಬೆಂಗಳೂರು : ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಆರ್ಮರ್ಡ್ ವೆಹಿಕಲ್ಸ್ ನಿಗಮ ಲಿಮಿಟೆಡ್ (AVNL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 1,213 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜೂನಿಯರ್ ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಆರ್ಮರ್ಡ್ ವೆಹಿಕಲ್ಸ್ ನಿಗಮ ಲಿಮಿಟೆಡ್
ಹುದ್ದೆಗಳ ಹೆಸರು: ಜೂನಿಯರ್ ಟೆಕ್ನಿಶಿಯನ್
ಒಟ್ಟು ಹುದ್ದೆಗಳು: 1,213
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 25
ಜೂನಿಯರ್ ಟೆಕ್ನಿಶಿಯನ್, ಅಸಿಸ್ಟಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಕನ್ಸಲ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ, ಸಿಎ, ಡಿಪ್ಲೋಮಾ, ಡಿಗ್ರಿ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.29 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಜನರಲ್, ಇಡಬ್ಲ್ಯೂಎಸ್, ಒಬಿಸಿಯವರಿಗೆ 300 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಕಂಪ್ಯೂಟರ್ ಬೇಸ್ಡ್ ಆನ್ ಲೈನ್ ಟೆಸ್ಟ್, ಟ್ರೇಡ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು avnl.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ಗೆ ವೇದಿಕೆ ಸಜ್ಜು : ಜು.19ಕ್ಕೆ ಹರಾಜು ಪ್ರಕ್ರಿಯೆ!



















