ಬೆಂಗಳೂರು: ಮಹಿಳಾ ಟ್ರಾಫಿಕ್ ಪೊಲೀಸ್ ಪೇದೆಗೆ ನಡು ರಸ್ತೆಯಲ್ಲೇ ಅವಾಜ್ ಹಾಕಿರುವ ಘಟನೆಯೊಂದು ನಡೆದಿದೆ. ಈ ಘಟನೆ ನಗರದ ಹುಳಿಮಾವು ಬಳಿಯ ಸಾಯಿ ಗಾರ್ಮೆಂಟ್ಸ್ ಬಳಿ ನಡೆದಿದೆ. ಸಿಗ್ನಲ್ ಜಂಪ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಟ್ರಾಫಿಕ್ ಪೊಲೀಸ್ ಪೇದೆಗೆ ನಡು ರಸ್ತೆಯಲ್ಲೇ ವ್ಯಕ್ತಿಯೊಬ್ಬ ಅವಾಜ್ ಹಾಕಿದ್ದಾನೆ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಸಿಗ್ನಲ್ ಜಂಪ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಅವಾಜ್ ಹಾಕಿದ್ದಾನೆ. ಸದ್ಯ ಅವಾಜ್ ಹಾಕಿದ ವ್ಯಕ್ತಿಯ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. KA 51 MW 2390 ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಅವಾಜ್ ಹಾಕಿದ್ದಾನೆ ಎಂದು ದೂರು ದಾಖಲಾಗಿದೆ