ಬೈಂದೂರು ತಾಲೂಕು ಕಚೇರಿಯಲ್ಲಿ “ಲಿಂಗತ್ವಾಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರಿಯ ಅಭಿಯಾನ” ಕಾರ್ಯಕ್ರಮ ನಡೆಯಿತು. ಈ ವೇಳೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಬೈಂದೂರು ಪಿಎಸ್ ಐ ತಿಮ್ಮೇಶ್ ಮಾತನಾಡಿ, ಇತ್ತೀಚೆಗೆ ಪ್ರತಿಯೊಬ್ಬರೂ ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿದ್ದು, ಅದನ್ನು ಬಳಸುವ ಮುನ್ನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. ಅಲ್ಲದೇ, ಸಂಚಾರಿ ನಿಯಮಗಳು ಸೇರಿದಂತೆ ಇನ್ನಿತರ ಮಾಹಿತಿಯನ್ನು ಹಂಚಿಕೊಂಡರು.