ಬೆಂಗಳೂರು : ಕರ್ನಾಟಕ ರಾಜ್ಯ ಆಯುಷ್ ಸೊಸೈಟಿಯು ರಾಷ್ಟ್ರೀಯ ಆಯುಷ್ ಅಭಿಯಾನದ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಖಾಲಿ ಇರುವ ಒಂದು ಲೆಕ್ಕಪತ್ರ ಸಹಾಯಕ ಅಥವಾ ಅಕೌಂಟ್ ಅಸಿಸ್ಟಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು, ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಆಯುಷ್ ಇಲಾಖೆ, ಕರ್ನಾಟಕ
ಹುದ್ದೆ ಹೆಸರು: ಅಕೌಂಟ್ ಅಸಿಸ್ಟಂಟ್
ಒಟ್ಟು ಹುದ್ದೆ: 01
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನದ ದಿನಾಂಕ: ಮಾರ್ಚ್ 25
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಕಾಂ, ಬಿಬಿಎ ಹಾಗೂ ಬಿಬಿಎಂ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ayush.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
Auditorium, 1st Floor, Directorate of AYUSH, Dhanwanthari Road, Bangalore-560009
ಸಮಯ: ಬೆಳಗ್ಗೆ 11 ಗಂಟೆ
ಇದನ್ನೂ ಓದಿ : ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರೀ ಆಘಾತ.. ಸ್ಟಾರ್ ವೇಗಿ ಟೂರ್ನಿಯಿಂದ ಔಟ್!



















