ಮಂಡ್ಯ : ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮಾಲಾಧಾರಿಗಳು ಪಾರಾಗಿದ್ದಾರೆ.
ಯಾಲದಹಳ್ಳಿಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಕೇರಳದ ಏರಿಮಲೈ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತವಿಲ್ಲದೇ ಬಸ್‌ನಲ್ಲಿದ್ದವರು ಪಾರಾಗಿದ್ದಾರೆ. ಕೆಲ ಮಾಲಾಧಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಹೊಸ ವೈರಸ್ ಭೀತಿ |
ಇದರ ನಡುವೆ ಕೇರಳದಲ್ಲಿ ಹೊಸ ವೈರಸ್ ಆತಂಕ ಹೆಚ್ಚಿಸಿದೆ. ಮೆದುಳು ತಿನ್ನುವ ಅಮಿಬಾ ಬಗ್ಗೆ ಎಚ್ಚರಿಕೆ ವಹಿಸುವಂತೆ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪುಣ್ಯನದಿಯಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ಹೋಗದಂತೆ ಎಚ್ಚರ ವಹಿಸಿ, ಬಿಸಿ ನೀರನ್ನೇ ಸೇವಿಸಲು ಕೇರಳ ಸರ್ಕಾರ ಸಲಹೆ ನೀಡಿದೆ.
ಇದನ್ನೂ ಓದಿ : ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಹೊಸ ವೈರಸ್ ಭೀತಿ | ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!



















