ಬಂಟ್ವಾಳ : ಬಿ.ಸಿ.ರೋಡ್‌ನ KSRTC ಬಸ್ ನಿಲ್ದಾಣದ ಬಳಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಪೊಲೀಸರು ಸಿಸಿಬಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಶುಕ್ರವಾರ ಬೆಳಗ್ಗೆ ಮಂಗಳೂರು ಹೊರವಲಯದ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಿದೆ.
ಕಕ್ಯಪದವು ನಿವಾಸಿ ಲಾವಣ್ಯ (21) ಎಂಬಾಕೆಯನ್ನು ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿ ಚೇತನ್ ಬಿಸಿರೋಡಿನ KSRTC ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆಯ ಬಳಿಕ ದಕ್ಷಿಣ ಕನ್ನಡ ಎಸ್‌ಪಿ ಅವರು ಆರೋಪಿಯ ಬಂಧನಕ್ಕಾಗಿ 3 ವಿಶೇಷ ತಂಡಗಳ ಮೂಲಕ ಕಾರ್ಯಾಚರಣೆ ಆರಂಭಿಸಿದ್ದರು. ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ ಬಂಟ್ವಾಳ ಮತ್ತು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : 2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!


















