ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್.ಐ.ಟಿ ರಚಸಿ, ಅಸಹಜ ಸಾವಿಗೀಡಾದವರ ಅಕ್ರಮವಾಗಿ ಹೂಳಲಾಗಿದೆ ಎಂಬ ಆರೋಪದ ಮೇಲೆ ಎಸ್.ಐ.ಟಿ ರಚಿಸಿ ತನಿಖೆಯ ಭಾಗವಾಗಿ ಉತ್ಖನನ ನಡೆಸುತ್ತಿರುವ ಬೆನ್ನಲ್ಲೇ, ಧರ್ಮಸ್ಥಳದ ಮಾದರಿಯಲ್ಲೇ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲೂ ಎಸ್.ಐ.ಟಿ ರಚನೆ ಮಾಡಿ ತನಿಖೆ ನಡೆಸುವಂತೆ ಸರ್ಕಾರಕ್ಕೆ ಹಿಂದೂ ಸಂಘಟನೆಗಳು ಒತ್ತಾಯಿಸಿದ್ದಾರೆ.
ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿದ್ದು, ದತ್ತಪೀಠ ಹಿಂದೂಗಳ ಪೀಠ. ದತ್ತಾತ್ರೇಯ ಸ್ವಾಮಿ ತಪಸ್ಸು ಮಾಡಿದ ಜಾಗವಿದು. ಇಲ್ಲಿ ನಕಲಿ ಗೋರಿಗಳನ್ನು ನಿರ್ಮಾಣ ಮಾಡಲಾಗಿದೆ. ಸತ್ಯ ತಿಳಿಯಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಿಂದೂ ಮುಖಂಡರು ಆಗ್ರಹಿಸಿದ್ದಾರೆ.
GPS ಅಂತಹ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಉತ್ಖನನ ಮಾಡಿ ಎಂದು ಆಗ್ರಹಿಸಿದ್ದಲ್ಲದೇ, ಹಿಂದಿನಿಂದಲೂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸುತ್ತಮುತ್ತಲಿನ ಪ್ರದೇಶದಲ್ಲಿ ನಕಲಿ ಗೋರಿಗಳಿವೆ. ಹೀಗಾಗಿ ಎಸ್.ಐ.ಟಿ ರಚಸಿ ಉತ್ಖನನ ಮಾಡುವಂತೆ ಜಿಲ್ಲಾಡಳಿತದ ಮೂಲಕ ಹಿಂದೂ ಸಂಘಟನೆ ಮುಖಂಡ ರಘು ಸಕಲೇಶಪುರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.