ನವದೆಹಲಿ: ಬಾಬು ಆತ್ಮಹತ್ಯೆ ನನಗೆ ನೋವು ತಂದಿದೆ. ನನಗೆ ಬಾಬು ಎಂಬ ವ್ಯಕ್ತಿ ಯಾರು ಎನ್ನುವುದು ಗೊತ್ತಿಲ್ಲ. ಈ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖ ಮಾಡಿದ್ದಾರೆ ಎಂದು ಕೂಡ ಗೊತ್ತಿಲ್ಲ ಎಂದು ಸಂಸದ ಡಾ ಸುಧಾಕರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಸುಧಾಕರ್, ಬಾಬು ಕುಟುಂಬದವರು ದೂರು ಕೊಡಲು ಠಾಣೆಗೆ ಹೋದಾಗ ಅಲ್ಲಿನ ಪಿಎಸ್ ಐ ಡೆತ್ ನೋಟ್ ನಲ್ಲಿ ಇರುವಂತೆ ದೂರು ಕೊಡಿ ಎಂದಿದ್ದಾರೆ. ಇಲ್ಲಿ ಶಾಸಕರು, ಉಸ್ತುವಾರಿ ಸಚಿವರ ರಾಜಕೀಯ ಇದೆ. ನನ್ನನು ಒಳಗೊಂಡಂತೆ ಯಾರೇ ತಪ್ಪಿತಸ್ಥರು ಇದ್ದರು ಅವರಿಗೆ ಉಗ್ರ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ಕಾನೂನು ಏನೇ ಇರಲಿ ತನಿಖೆ ಪಾರದರ್ಶಕವಾಗಿರಲಿ. ಇದು ಮಾಧ್ಯಮದ ಟ್ರಯಲ್ ಆಗುವುದು ಬೇಡ. ಸರಿಯಾಗಿ ತನಿಖೆ ಆಗಲಿ. ದೆಹಲಿಯಿಂದ ವಾಪಾಸ್ಸಾದ ಬಳಿಕ ಮೃತನ ಕುಟುಂಬದ ಸದಸ್ಯರನ್ನು ನಾನು ಭೇಟಿ ಮಾಡುತ್ತೇನೆ ಎಂದಿದ್ದಾರೆ.
ಇದರ ಹಿಂದೆ ರಾಜಕೀಯ ಪಿತೂರಿ ಇದ್ದು, ಇದು ಜಗತ್ ಜಾಹೀರಾತು ಆಗಿದೆ. ಕಾಂಗ್ರೆಸ್ ಶಾಸಕರ ಹೆಸರು ಬಂದರೆ ಒಂದು ಕಾನೂನು. ಬಿಜೆಪಿ ಶಾಸಕ, ಸಂಸದರು ಹೆಸರು ಬಂದರೆ ಬೇರೆ ಕಾನೂನು ಎಂದು ಅಸಮದಾನ ವ್ಯಕ್ತಪಡಿಸಿದ್ದಲ್ಲದೇ, ಬಾಬು ಸಾವನ್ನು ರಾಜಕೀಯ ಕಾರಣಕ್ಕೆ ಎಳೆದು ತರುವುದು ಸರಿ ಅಲ್ಲ ಎಂದಿದ್ದಾರೆ.