ಯಾದಗಿರಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಸಾವನ್ನಪ್ಪಿರುದಾಗಿ ಪೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಯಾದಗಿರಿ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಯಾದಗಿರಿ ತಾಲೂಕಿನ ಬಳಿಚಕ್ರ ತಾಂಡಾದ ನಿವಾಸಿ ನೀಲಾಬಾಯಿ ಎಂಬಾಕೆ ನಿನ್ನೆ ಶನಿವಾರ ಬೆಳಗ್ಗೆ ಹೆರಿಗೆ ನೋವಿನಿಂದ ಯಾದಗಿರಿ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಹಿಳೆ ಹೆರಿಗೆ ನೋವಿನಿಂದ ಬಳಲುತ್ತಿದ್ದರು ವೈದ್ಯರು ಆಕೆಗೆ ಸ್ಪಂದಿಸದೆ ನಿರ್ಲಕ್ಷ್ಯ ತೋರಿದ್ದಾರೆ ಹಾಗೂ ಆಸ್ಪತ್ರೆಯ ಸಿಬ್ಬಂದಿ ಬೆಡ್ ಕೂಡ ನೀಡದೆ ಇರುವುದರಿಂದ ಇಡೀ ದಿನ ಆಸ್ಪತ್ರೆಯ ನೆಲದ ಮೇಲೆ ಮಲಗಿ ನೋವಿನಿಂದ ಬಳಲಿದ್ದಾರೆ.

ರಾತ್ರಿಯಿಡೀ ತೀವ್ರ ಹೆರಿಗೆ ನೋವಿನಿಂದ ನೀಲಾಬಾಯಿ ಬಳಲಿದ ಬಳಿಕ ಬೆಳಗ್ಗೆ 5 ಗಂಟೆ ಹೊತ್ತಿಗೆ ಸಿಜೇರಿಯನ್ ಮಾಡಿದ್ದಾರೆ ಈ ವೇಳೆ ಮಗು ಸಾವನ್ನಪ್ಪಿದೆ. ನಾರ್ಮಲ್ ಹೆರಿಗೆ ಆಗುತ್ತದೆ ಎಂದು ಹೇಳಿ ಸಿಜೇರಿಯನ್ ಮಾಡಿರುವುದರಿಂದ ಮಗು ಸಾವನ್ನಪ್ಪಿದೆ ಎಂದು ಮಹಿಳೆಯ ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿದ್ದಾರೆ.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ವಿರುದ್ದವೇ FIR | ದೂರು ನೀಡಲು ಬಂದಿದ್ದೇ ತಪ್ಪಾಯ್ತಾ ?



















