ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ. ಇತ್ತೀಚೆಗೆ ಅವರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಈಗ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದಾರೆ. ಸದ್ಯ ದರ್ಶನ್ ಗೆ ಹೆಚ್ಚಿನ ಚಿಕಿತ್ಸೆ ಬೇಕಿದ್ದು, ಬಳ್ಳಾರಿಯಲ್ಲಿ ಸ್ಕ್ಯಾಕಿಂಗ್ ಮಾಡಿಸಿಕೊಳ್ಳಲು ದರ್ಶನ್ ಒಪ್ಪುತ್ತಿಲ್ಲ ಎನ್ನಲಾಗುತ್ತಿದೆ.
ಜಾಮೀನು ಪಡೆದು ಬೆಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯುವ ಆಲೋಚನೆಯಲ್ಲಿ ದರ್ಶನ್ ಇದ್ದಾರೆ ಎನ್ನಲಾಗುತ್ತಿದೆ. ದರ್ಶನ್ ಗೆ ಬೆನ್ನು ನೋವಿನೊಂದಿಗೆ ಊಟದ ಸಮಸ್ಯೆ ಕೂಡ ಕಾಡುತ್ತಿದೆ. ಹೀಗಾಗಿ ಕೇಂದ್ರ ಕಾರಾಗೃಹದ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಊತ ಇದ್ದು, ಉಲ್ಭಣವಾಗುವ ಸಾಧ್ಯತೆ ಇದೆ. ಹೀಗಾಗಿ ಸ್ಕಾನಿಂಗ್ ಮಾಡಿಸಬೇಕೆಂದು ವೈದ್ಯರು ಹೇಳಿದ್ದಾರೆ. ಆದರೆ, ಇದಕ್ಕೆ ದರ್ಶನ್ ಒಪ್ಪಿಲ್ಲ ಎನ್ನಲಾಗುತ್ತಿದೆ.
ಬೆನ್ನು ನೋವಿನಿಂದ ರಾತ್ರಿ ಸರಿಯಾಗಿ ನಿದ್ರೆ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ವಿಮ್ಸ್ ವೈದ್ಯರಿಂದಲೂ ಬೆನ್ನುಮೂಳೆಯ ತಪಾಸಣೆ ಮಾಡಲಾಗಿತ್ತು. ಸ್ಕ್ಯಾನಿಂಗ್ ಮಾಡಿಸಲು ವೈದ್ಯರು ಸಲಹೆ ನೀಡಿದ್ದಾರೆ. ಆದರೆ ಬಳ್ಳಾರಿ ಬದಲು ಬೆಂಗಳೂರಿಗೆ ಹೋಗಿ ಸ್ಕ್ಯಾನಿಂಗ್ ಮಾಡಿಸುವ ಆಲೋಚನೆಯಲ್ಲಿದ್ದಾರೆ ಎನ್ನಲಾಗಿದೆ. ಹೀಗಾಗಿ ವೈದ್ಯರು ನೋವು ನಿವಾರಕ ಮಾತ್ರೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.