ಬಾಗಲಕೋಟೆ: ರಸ್ತೆ ದುರಸ್ತಿ ಕಾಮಗಾರಿ ಮಾಡದ ಹಿನ್ನೆಲೆ, ಗ್ರಾಮಸ್ಥರು ಗ್ರಾಮ ಸೌಧಕ್ಕೆ ಮುಳ್ಳಿನ ಬೇಲಿ ಹಚ್ಚಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದಲ್ಲಿ ನಡೆದಿದೆ.
ರೈತರ ಜಮೀನುಗಳಿಗೆ ತೆರಳಲು ಸರಿಯಾಗಿ ರಸ್ತೆ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದರು. ರಸ್ತೆ ದುರಸ್ತಿ ಮಾಡುವಂತೆ ಹಲವು ವರ್ಷಗಳಿಂದ ಮನವಿ ಸಲ್ಲಿಸಿದರು ಅಧಿಕಾರಿಗಳು ಸ್ಪಂದಿಸದೆ ನಿರ್ಲಕ್ಷ್ಯ ಮಾಡಿದ್ದಾರೆ.
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಮುಳ್ಳು ಹಚ್ಚಿ ಕಾರ್ಯಾಲಯವನ್ನು ಬಂದ್ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡುವ ಮೂಲಕ ಗ್ರಾಪಂ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಸ್ ನಿಲ್ದಾಣದಿಂದ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.