ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇಂದು ಬಿರುಸಿನ ಮತದಾನ ನಡೆಯುತ್ತಿದ್ದು, ಈ ವೇಳೆ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ವೃದ್ದೆಯೊಬ್ಬರು ಕುಸಿದು ಬಿದ್ದ ಘಟನೆ ನಡೆದಿದೆ. ಈ ಮೂಲಕ ಬಾಗಲಕೋಟೆ ಉಪಚುನಾವಣೆ ಅವ್ಯವಸ್ಥೆಯ ಗೂಡಾಗಿದೆ ಎಂಬ ಮಾತುಗಳು ಕೇಳಿಬಂದಿದೆ.
ಹೌದು.. ಅಮೀನಗಡದಲ್ಲಿ ಮತದಾನದ ವೇಳೆ ಮತದಾನಕ್ಕೆ ಆಗಮಿಸಿದ ಮತದಾರರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾಗಿದೆ. ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಮತದಾರರು ಸಂಕಷ್ಟ ಎದುರಾಗಿದ್ದು, ಬಿಸಿಲಿನಿಂದ ತಪ್ಪಿಸಿಕೊಳ್ಳಲು ನೆರಳಿನ ವ್ಯವಸ್ಥೆಯೂ ಇಲ್ಲದ ಕಾರಣ ಜನರ ಪರದಾಡುವಂತಾಗಿದೆ. ಈ ಅವ್ಯವಸ್ಥೆಯ ನಡುವೆಯೇ, ಸಾಲಿನಲ್ಲಿ ನಿಂತಿದ್ದ ಒಬ್ಬ ವೃದ್ಧೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.
ತಕ್ಷಣ ಸ್ಥಳೀಯರು ವೃದ್ದೆಯನ್ನು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯ ಅಮಿನಗಡದಲ್ಲಿ ಮತದಾರರಿಗೆ ಮೂಲಭೂತ ಸೌಲಭ್ಯದ ಕೊರತೆ ಉಂಟಾಗಿದ್ದು, ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ನಗರಸಭೆಯಲ್ಲಿ 73 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ.. ಈ ಜಿಲ್ಲೆಯವರಿಗೆ ಶುಭ ಸುದ್ದಿ!



















