ಬಾಗಲಕೋಟೆ : ಜಿಲ್ಲೆಯಲ್ಲಿ ತಡರಾತ್ರಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ಕೊಡಲಿಯಿಂದ ತಲೆಗೆ ಹಾಗೂ ಕತ್ತಿಗೆ ಹೊಡೆದು ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ ನಡೆದಿದೆ.
ಸಂಗಪ್ಪ ನಾಲತವಾಡ (46) ಕೊಲೆಯಾದ ವ್ಯಕ್ತಿ. ಮಾಹಿತಿ ಪ್ರಕಾರ, ಕಾರಿನಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ಮೃತ ಸಂಗಪ್ಪ ನಾಲತವಾಡ ಗುತ್ತಿಗೆದಾರರಾಗಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದರು ಎಂಬುದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಬೀಳಗಿ ಶಾಸಕ ಜೆಟಿ ಪಾಟೀಲ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರು ಹಾಗೂ ಸ್ಥಳೀಯರೊಂದಿಗೆ ಚರ್ಚೆ ನಡೆಸಿದ್ದಾರೆ.
ಈ ಘಟನೆ ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಜಮೀನಿಗೆ ಹಾಕಿದ್ದ ಹುರುಳಿಗೆ ಸಿಲುಕಿ ಹುಲಿ ಸಾವು


















