ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ತಮಿಳುನಾಡು ಅಧ್ಯಕ್ಷ ಆರ್ಮ್ ಸ್ಟ್ರಾಂಗ್ (Armstrong) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್ ಮಾಹಿತಿ ನೀಡಿದ್ದು, ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರ ವಿಚಾರಣೆಯ ನಂತರ ಪ್ರಕರಣಕ್ಕೆ ಸಂಬಂಧಿಸಿದ ಹಿಂದಿನ ಕಾರಣ ಹೊರ ಬೀಳಲಿದೆ ಎಂದು ಅವರು ಹೇಳಿದ್ದಾರೆ.
ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಅವರ ನಿವಾಸದ ಹತ್ತಿರ ಬೈಕ್ ನಲ್ಲಿ ಬಂದ ಆರು ಜನ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಯ ನಂತರ ಆರ್ಮ್ ಸ್ಟ್ರಾಂಗ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ಕುರಿತು ಸದ್ಯ ಪೊಲೀಸರು ತನಿಕೆ ಕೈಗೊಂಡಿದ್ದಾರೆ.