ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಆಂಡ್ ಗ್ಯಾಂಗ್ ನ (Darshan Gang) ಮತ್ತಿಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (Bail application) 57ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.
ಎ16 ಆರೋಪಿ ಕೇಶವಮೂರ್ತಿ ಮತ್ತು ಎ10 ಆರೋಪಿ ವಿನಯ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ 57ನೇ ಸಿಸಿಹೆಚ್ ನ್ಯಾಯಾಲಯ (CCH Court) ತಿರಸ್ಕರಿಸಿ ಆದೇಶಿಸಿದೆ. ಎರಡು ದಿನಗಳ ಹಿಂದೆಯಷ್ಟೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಮತ್ತು ಎ7 ಆರೋಪಿ ಅನುಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು.
ಎ10 ಆರೋಪಿ ಆಗಿರುವ ವಿನಯ್ ಪಾತ್ರದ ಕುರಿತು ಸಾಕ್ಷಿ ಇದ್ದು, ಸಿಆರ್‌ಪಿಸಿ 164 ಅಡಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಜಾಮೀನು ನೀಡಿದಲ್ಲಿ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ತನಿಖೆ ಹಂತದಲ್ಲಿ ಇರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.