ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಸೆ. 23ರಂದು ಕೋರ್ಟ್ ಮೂವರಿಗೆ ಜಾಮೀನು ನೀಡಿದೆ. ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ದರ್ಶನ್ ಮತ್ತು ಗ್ಯಾಂಗ್ ಈ ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರು ಸೆರೆಂಡರ್ ಆಗಿದ್ದರು. ಆ ಪೈಕಿ ಕಾರ್ತಿಕ್, ನಿಖಿಲ್ ನಾಯಕ್ ಮತ್ತು ಕೇಶವಮೂರ್ತಿ ಪ್ರಮುಖರು. ಈ ಕೇಸ್ ನಲ್ಲಿ ಕಾರ್ತಿಕ್ ಎ15, ಕೇಶವಮೂರ್ತಿ ಎ16 ಹಾಗೂ ನಿಖಿಲ್ ನಾಯಕ್ ಎ17 ಆಗಿದ್ದಾರೆ. ಸದ್ಯ ಈ ಮೂವರಿಗೂ ಜಾಮೀನು ಸಿಕ್ಕಿದೆ.
57ನೇ ಸಿಸಿಹೆಚ್ ಕೋರ್ಟ್ ನಿಂದ ಎ15 ಕಾರ್ತಿಕ್ ಹಾಗೂ ಎ17 ನಿಖಿಲ್ ನಾಯಕ್ಗೆ ಜಾಮೀನು ಮಂಜೂರಾಗಿದೆ. ಎ16 ಆಗಿರುವ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಸಾಕ್ಷ್ಯ ನಾಶ ಮಾಡಿದ ಆರೋಪ ಈ ಮೂವರೂ ಆರೋಪಿಗಳ ಮೇಲಿದೆ.
ಅಲ್ಲದೇ, ಇನ್ನಿತರ ಆರೋಪಿಗಳಾದ ಪವಿತ್ರಾಗೌಡ, ದರ್ಶನ್ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅವರ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿದೆ. ಸೆ. 25ರಂದು ಪವಿತ್ರಾಗೌಡ ಜಾಮೀನು ಅರ್ಜಿಯ ವಿಚಾರಣೆ ಹಾಗೂ ಸೆ. 27ಕ್ಕೆ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಲಾಗಿದೆ.