ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದು, ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಕೇಳಿ ಬಂದಿದೆ. ವಿದೇಶಿ ಸಂಖ್ಯೆಯಿಂದ ಬೆದರಿಕೆ ಬಂದಿದ್ದು, ಈ ಕುರಿತು ಎಫ್ ಐಆರ್ ದಾಖಲಾಗಿದೆ.
ಆದಷ್ಟು ಬೇಗ ಕಾಂಗ್ರೆಸ್ ತೊರೆಯಬೇಕು ಇಲ್ಲದಿದ್ದರೆ, ನಿಮಗೂ, ನಿಮ್ಮ ಕುಟುಂಬಕ್ಕೂ ಕಂಟಕ ಕಾದಿದೆ. ಇದು ನಮ್ಮ ಕೊನೆಯ ಸಂದೇಶ. ಚುನಾವಣೆಗೂ ಮುನ್ನ ನಾವೇನು ಎಂಬುವುದನ್ನು ತೋರಿಸುತ್ತೇವೆ. ಎಲ್ಲಿ ಬೇಕಾದರೂ ದೂರು ನೀಡಿ, ಇದು ನಮ್ಮ ಮೊದಲ ಮತ್ತು ಕೊನೆಯ ಎಚ್ಚರಿಕೆ ಎಂದು ಅನಾಮಿಕ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಕುರಿತು ಸೋನಿಪತ್ ಬಹಲ್ಗಢ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಜರಂಗ್ ದೂರಿನ ಮೇರೆಗೆ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇತ್ತೀಚೆಗಷ್ಟೇ ಬಜರಂಗ್ ಮತ್ತು ವಿನೇಶ್ ಫೋಗಟ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಬಜರಂಗ್ ಪುನಿಯಾಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ, ವಿನೇಶ್ ಫೋಗಟ್ ಹರಿಯಾಣ ವಿಧಾನಸಭೆಯ ಜೂಲಾನಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಬಜರಂಗ್ ರನ್ನು ಕಾಂಗ್ರೆಸ್ ಕಿಸಾನ್ ಮೋರ್ಚಾದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.