ಗದಗ: ಶಾರ್ಟ್ ಸರ್ಕ್ಯೂಟ್‌ನಿಂದ ಬೇಕರಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ.

ಪಟ್ಟಣದ ಬಸ್ ನಿಲ್ದಾಣದ ಎದುರಿನ ನ್ಯೂ ಮಹಾಂತೇಶ ಬೇಕರಿ, ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿದ್ದ ಅಪಾರ ಮೌಲ್ಯದ ತಿನಿಸು ಪದಾರ್ಥಗಳು ಸುಟ್ಟು ಭಸ್ಮವಾಗಿವೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಹರಸಾಹಸ ಮಾಡಿದ್ದು, ಅಂದಾಜು ಇಪ್ಪತ್ತೈದು ಲಕ್ಷ ರೂ.ಗೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ.
ಸ್ಥಳಕ್ಕೆ ತಹಸೀಲ್ದಾರ್ ಪಿ.ಎಸ್. ಯರ್ರಿಸ್ವಾಮಿ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.