ಬಳ್ಳಾರಿ : ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಗುಂಡೇಟಿಗೆ ಬಲಿಯಾದ ರಾಜಶೇಖರ್ ಅವರ ಕುಟುಂಬವನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಭೇಟಿ ಮಾಡಿ ಸಾಂತ್ವನ ತಿಳಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ ಮನೆಗೆ ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿರುವೆ. ಘಟನೆ ಅಗಬಾರದಾಗಿತ್ತು. ಮೃತ ವ್ಯಕ್ತಿಯ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುವೆ. ಕುಟುಂಬ ಜೊತೆಗೆ ಪಕ್ಷ ಇದೆ ಎಂದು ತಿಳಿಸಲು ಬಂದಿದ್ದೇನೆ ಎಂದಿದ್ದಾರೆ.
ಉಳಿದ ವಿಚಾರವನ್ನು ಕಾರ್ಯಕರ್ತರ ಚರ್ಚೆ ಮಾಡಿದ ಬಳಿಕ ಹೇಳುವೆ. ಮೃತ ವ್ಯಕ್ತಿಯ ಕುಟುಂಬ ಸರ್ಕಾರಿ ಉದ್ಯೋಗಕ್ಕಾಗಿ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ವಿಚಾರ ಮಾಡಲಾಗುತ್ತದೆ. ಪ್ರೊಸೀಜರ್ ನೋಡಿಕೊಂಡು ಕಾನೂನು ಚೌಕಟ್ಟಿನ ಅಡಿ ನೌಕರಿ ಕೊಡುವ ಪ್ರಯತ್ನ ಮಾಡುವೆ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಕೂಡ ಉಪಸ್ಥಿತರಿದ್ದರು.
ಇದನ್ನೂ ಓದಿ : 5 ವರ್ಷವೂ ಸಿದ್ದರಾಮಯ್ಯನವರೇ ಸಿಎಂ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ | ಬಸವರಾಜ ರಾಯರೆಡ್ಡಿ



















