ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಬೆಂಗಳೂರಿನಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾಮರ್ ಲಾರಿ (Balmer Lawrie Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 62 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಬಾಮರ್ ಲಾರಿ
ಒಟ್ಟು ಹುದ್ದೆಗಳು: 62
ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್ ಟ್ರೈನಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 9
ಕರ್ನಾಟಕದ ಬೆಂಗಳೂರು, ಪಶ್ಚಿಮ ಬಂಗಾಳದ ಕಲ್ಕತ್ತ, ತಮಿಳುನಾಡಿನ ಚೆನ್ನೈನಲ್ಲಿರುವ ಕಚೇರಿಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೆಕ್ಯಾನಿಕಲ್, ಕೆಮಿಕಲ್, ಐಟಿ, ಲೆದರ್ ಟೆಕ್ನಾಲಜಿ ಸೇರಿ ಹಲವು ವಿಭಾಗಗಳಲ್ಲಿ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಜನರಲ್, ಇಡಬ್ಲ್ಯೂಎಸ್, ಒಬಿಸಿ ಸಮುದಾಯದವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 25ರಿಂದ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಪದವಿ, ಬಿ.ಇ, ಬಿ.ಟೆಕ್, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು balmerlawrie.com ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : PhD ಮುಗಿಸಿದವರಿಗೆ ಅವಕಾಶ



















