ಬೆಂಗಳೂರು: ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ, ಸೋಪುಗಳ ಮಾರಟವನ್ನು ನಿಷೇಧಿಸಿದ ಸರ್ಕಾರ ಆದೇಶ ಹೊರಡಿಸಿದೆ.
ಅರಣ್ಯ ಮತ್ತು ಪರಿಸರ ಇಲಾಖೆಯು ಮಾರಟ ನಿಷೇಧಿಸಿ ಆದೇಶ ಹೊರಡಿಸಿದೆ. ಇತ್ತೀಚೆಗೆ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪೂ ಬಳಕೆ ಹೆಚ್ಚಾಗಿದೆ. ಸೋಪು, ಶಾಂಪು ಬಳಕೆ ಮಾಡಿದ ಅರ್ಧಂಬರ್ಧ ಆದ ಖಾಲಿ ಕವರ್ ಗಳನ್ನು ನದಿ ತೀರದಲ್ಲೇ ಬಿಟ್ಟು ಭಕ್ತರು ತೆರಳುತ್ತಿದ್ದಾರೆ. ಇದರಿಂದಾಗಿ ನೀರು ಕಲುಷಿತವಾಗುತ್ತಿದ್ದು, ಜನರಿಗೂ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಹೊಸ ಆದೇಶ ಹೊರಡಿಸಿದೆ.
ನದಿ ದಡಗಳಲ್ಲಿ ಸೋಪು, ಶಾಂಪೂ ಮಾರಾಟ ಮಾಡದಂತೆ ನಿಷೇಧ ಹೇರಿದೆ. ಅಲ್ಲದೇ, ಭಕ್ತರು ತಮ್ಮ ವಸ್ತುಗಳನ್ನು ನದಿಗಳಲ್ಲಿ ವಿಸರ್ಜಿಸದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.