ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾ ಪ್ರವೇಶಕ್ಕೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ 30 ದಿನಗಳ ಕಾಲ ಜಿಲ್ಲೆಗೆ ಬರದಂತೆ ಜಿಲ್ಲಾಧಿಕಾರಿಗಳ ಆದೇಶ ಹೊರಡಿಸಿರುವುದಕ್ಕೆ ಹಿಂದೂ ಸಂಘಟನೆ, ಬಿಜೆಪಿ ಆಕ್ರೋಶ ಹೊರಹಾಕಿದೆ.
ಸಾಮಾಜಿಕ ಜಾಲತಾಣದಲ್ಲಿ ಸ್ಟಾಂಡ್ ವಿಥ್ ಶರಣ್ ಅಭಿಯಾನ ಸೃಷ್ಟಿಯಾಗಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸೇರಿದಂತೆ, ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಮೂಡಿಗೆರೆ, ಆಲ್ದೂರು ಚಿಕ್ಕಮಗಳೂರಿನಲ್ಲಿ ಶರಣ್ ನೇತೃತ್ವದಲ್ಲಿ ನಡೆಯಬೇಕಿದ್ದ ಬೈಠಕ್ ಗೆ ಸದ್ಯ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ನಿರ್ಬಂಧ ಹೇರಿದ್ದಾರೆ.
ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿಯಾಗಿರುವ ಶರಣ್ ಪಂಪ್‌ವೆಲ್ ಅವರನ್ನು ಕೋಮು ದ್ವೇಷದ ಭಾಷಣ ಮಾಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಕಾರಣ ನೀಡಿ ನಿರ್ಬಂಧ ಹೇರಲಾಗಿದ್ದು, ಜು. 6ರ ಸಂಜೆ 5 ಗಂಟೆಯಿಂದ ಆ. 4ರ ಮಧ್ಯರಾತ್ರಿವರೆಗೂ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರನ್ನು ಹಿಂದೂ ಸಂಘಟನೆಗಳ ನಿಯೋಗ ಭೇಟಿ ಮಾಡಿ ನಿರ್ಬಂಧವನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಲಾಗುತ್ತದೆ ಎಂದು ಮೂಲಳಿಂದ ಮಾಹಿತಿ ಲಭ್ಯವಾಗಿದೆ.