ವಿಐಪಿಗಳ ಸಂಚಾರದ ವೇಳೆ ಸೈರನ್ ಬಳಸುವುದನ್ನು ನಿಷೇಧಿಸಿ ಡಿಜಿ ಅಂಡ್ ಐಜಿಪಿ ಸಲೀಂ ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಘಟಕಾಧಿಕಾರಿಗಳಿಗೆ ಆದೇಶ ನೀಡಿರುವ ಅವರು, ವಿಐಪಿ ವಾಹನಗಳ ಸೈರನ್ ಬಳಕೆಯಿಂದ ಗಣ್ಯ ವ್ಯಕ್ತಿಗಳ ಓಡಾಟದ ಮಾಹಿತಿ ಲಭ್ಯವಾಗುತ್ತದೆ. ಇದರಿಂದ ಶಬ್ದ ಮಾಲಿನ್ಯ ಹಾಗೂ ಇತರ ವಾಹನ ಸವಾರರಿಗೆ ಗೊಂದಲ ಉಂಟಾಗುತ್ತಿದೆ. ಹೀಗಾಗಿ ಸೈರನ್ ಬಳಕೆಗೆ ಕಡಿವಾಣ ಹಾಕಿ ಎಂದು ಸುತ್ತೋಲೆಯಲ್ಲಿ ಹೇಳಿದ್ದಾರೆ.
ಅಲ್ಲದೇ, ವಿಐಪಿ ಸಂಚಾರದ ಸಂದರ್ಭದಲ್ಲಿ ಅನಿವಾರ್ಯತೆ ಇದ್ದರೆ ಮಾತ್ರ ಅಂಬುಲೆನ್ಸ್, ಪೊಲೀಸ್ ವಾಹನಗಳು, ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಬಳಸುವಂತೆ ಸೂಚಿಸಲಾಗಿದೆ.



















